Search in ThisBlogಈಬ್ಲಾಗಲ್ಲಿ ವಿಷಯ ಹುಡುಕಿ

Thursday, May 16, 2013

Transfer guidelines 2013 ವರ್ಗಾವಣೆಗೆ ಶೀಘ್ರ ಚಾಲನೆ




views in this article is not mine, CLICK source cutesy below,
http://newshunt.com/share/21492890 Source:Prajavani

         ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿರುವುದರಿಂದ ಈ ವರ್ಷ ಹೆಚ್ಚಿನ ಪ್ರಮಾಣದಲ್ಲಿ ನೌಕರರ ವರ್ಗಾವಣೆಯಾಗುವ ಸಾಧ್ಯತೆ ಇದೆ. ಹೊಸದಾಗಿ ಬರಲಿರುವ ಸಚಿವರು, ನೂತನ ಶಾಸಕರು ತಮಗೆ ಬೇಕಾದ ಅಧಿಕಾರಿಗಳನ್ನು ಆಯಕಟ್ಟಿನ ಜಾಗಗಳಿಗೆ ವರ್ಗಾವಣೆ ಮಾಡಿಸಿಕೊಳ್ಳುವುದು ರೂಢಿ. ಹೀಗಾಗಿ ಬದಲಾವಣೆ ಭಾರಿ ಪ್ರಮಾಣದಲ್ಲೇ ನಡೆಯುವ ನಿರೀಕ್ಷೆ ಇದೆ.

16 May 2013 02:00, 

(16 May) : ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ವಾರದಲ್ಲಿ ಚಾಲನೆ ದೊರೆಯಲಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ವರ್ಗಾವಣೆಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ರೂಪಿಸುವ ಪ್ರಕ್ರಿಯೆ ಆರಂಭಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನುಮೋದನೆ ಪಡೆದು ಸೋಮವಾರದ ವೇಳೆಗೆ ಅಧಿಕೃತವಾಗಿ ಮಾರ್ಗಸೂಚಿಗಳನ್ನು ಪ್ರಕಟಿಸಲಾಗುತ್ತದೆ. ಈ ತಿಂಗಳಲ್ಲೇ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ. ಸಾಮಾನ್ಯವಾಗಿ ವರ್ಗಾವಣೆಗೆ ತಿಂಗಳ ಕಾಲಾವಕಾಶ ನೀಡಲಾಗುತ್ತದೆ. ಸಂಪುಟ ರಚನೆಯಾದ ನಂತರ, ಆಯಾ ಇಲಾಖೆ ಸಚಿವರಿಗೆ ವರ್ಗಾವಣೆ ಅಧಿಕಾರ ನೀಡಲಾಗುತ್ತದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು `ಪ್ರಜಾವಾಣಿ'ಗೆ ತಿಳಿಸಿದರು. ಪ್ರತಿವರ್ಷ ಸಾಮಾನ್ಯವಾಗಿ ಏಪ್ರಿಲ್, ಮೇ ತಿಂಗಳಲ್ಲಿ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ನಡೆಯುತ್ತದೆ. ಆದರೆ, ಈ ವರ್ಷ ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ವರ್ಗಾವಣೆ ತಡವಾಗಿದೆ. ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆಯೇ ಮಾರ್ಗಸೂಚಿ ರೂಪಿಸುವ ಪ್ರಕ್ರಿಯೆ ಆರಂಭವಾಗಿದ್ದು, ಆದಷ್ಟು ಬೇಗ ವರ್ಗಾವಣೆ ಪೂರ್ಣಗೊಳಿಸಬೇಕು ಎಂಬ ಇಂಗಿತವನ್ನು ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ವರ್ಗಾವಣೆಗೆ ನಿಗದಿ ಮಾಡಬೇಕಾದ ಕಾಲಾವಕಾಶ ಎಷ್ಟು, ಯಾವ ಪ್ರಮಾಣದಲ್ಲಿ ನೌಕರರನ್ನು ವರ್ಗಾವಣೆ ಮಾಡಬೇಕು ಎಂಬುದನ್ನು ಮುಖ್ಯಮಂತ್ರಿಗಳೇ
ತೀರ್ಮಾನಿಸಲಿದ್ದಾರೆ. ಈ ತಿಂಗಳ ಅಂತ್ಯದಲ್ಲಿ ಶಾಲೆಗಳು ಪುನರಾರಂಭವಾಗಲಿವೆ. ಆ ನಂತರ ಶಿಕ್ಷಕರನ್ನು ವರ್ಗಾವಣೆ ಮಾಡಿದರೆ ಮಕ್ಕಳಿಗೆ ತೊಂದರೆಯಾಗುತ್ತದೆ. ಅಲ್ಲದೆ ವರ್ಗಾವಣೆಗೊಳ್ಳುವ ನೌಕರರ ಮಕ್ಕಳನ್ನು ಶಾಲೆಗೆ ಸೇರಿಸಲು ತೊಂದರೆಯಾಗುತ್ತದೆ ಎಂಬುದು ಸರ್ಕಾರದ ಗಮನದಲ್ಲಿದೆ. ಈ ಅಂಶವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಆದಷ್ಟು ಬೇಗ ಮಾರ್ಗಸೂಚಿ ರೂಪಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ನೌಕರರ ವರ್ಗಾವಣೆಯನ್ನು ಮನಬಂದಂತೆ ಮಾಡುವುದನ್ನು ತಡೆಯುವ ಉದ್ದೇಶದಿಂದ 2001ರಲ್ಲಿ ಎಸ್.ಎಂ.ಕೃಷ್ಣ ಸರ್ಕಾರ, ಸರ್ಕಾರಿ ನೌಕರರ ವರ್ಗಾವಣೆ ಕಾಯ್ದೆಯನ್ನು ಜಾರಿಗೊಳಿಸಿದ್ದು, ಈಗಲೂ ಅದು ಅನುಷ್ಠಾನದಲ್ಲಿದೆ. ಆ ಕಾಯ್ದೆಯಲ್ಲಿ ಸಣ್ಣಪುಟ್ಟ ಬದಲಾವಣೆಗಳು ಆಗಿದ್ದರೂ ಕಾಯ್ದೆಯ ಮೂಲ ಸ್ವರೂಪದಲ್ಲಿ ಬದಲಾವಣೆ ಆಗಿಲ್ಲ. ಶಿಕ್ಷಕರ ವರ್ಗಾವಣೆಯನ್ನು ಕೌನ್ಸೆಲಿಂಗ್ ಮೂಲಕವೇ ಮಾಡಲಾಗುತ್ತಿದೆ. ಹಿಂದಿನ ವರ್ಷಗಳಲ್ಲಿ ಎ ಮತ್ತು ಬಿ ವರ್ಗದ ಶೇಕಡ 3ರಷ್ಟು ಹಾಗೂ ಸಿ ಮತ್ತು ಡಿ ವರ್ಗದ ಶೇ 5ರಷ್ಟು ನೌಕರರನ್ನು ವರ್ಗಾವಣೆ ಮಾಡಲಾಗುತ್ತಿತ್ತು. ನೌಕರರ ಒಟ್ಟಾರೆ ವರ್ಗಾವಣೆ ಪ್ರಮಾಣ ಆಯಾ ಇಲಾಖೆಗಳ ಒಟ್ಟು ವೃಂದದ ಶೇ 5ರಷ್ಟನ್ನು ಮೀರಬಾರದು ಎಂದು ಸೂಚಿಸಲಾಗುತ್ತಿತ್ತು. ಆದರೆ, ಬಹುತೇಕ ಸಂದರ್ಭಗಳಲ್ಲಿ ಇದರ ಪಾಲನೆ ಆಗಿಲ್ಲ. ಗಡುವು ಮುಗಿದ ನಂತರವೂ ವರ್ಗಾವಣೆ ಮಾಡಿದ ನಿದರ್ಶನಗಳು ಇವೆ. ಕಾಯ್ದೆ ಪ್ರಕಾರ `ಎ' ವರ್ಗದ ನೌಕರರು ಮೂರು ವರ್ಷ, `ಬಿ' ವರ್ಗದ ನೌಕರರು ನಾಲ್ಕು ವರ್ಷ, `ಸಿ' ವರ್ಗದ ನೌಕರರು ಐದು ವರ್ಷ ಹಾಗೂ `ಡಿ' ವರ್ಗದ ನೌಕರರು ಏಳು ವರ್ಷ ಒಂದೇ ಕಡೆ ಸೇವೆ ಸಲ್ಲಿಸಿದ್ದರೆ ಮಾತ್ರ ವರ್ಗಾವಣೆ ಮಾಡಬೇಕು. ಆದರೆ, ಅನೇಕ ಸಂದರ್ಭಗಳಲ್ಲಿ ಅವಧಿ ಮುಗಿಯುವ ಮೊದಲೇ ವರ್ಗಾವಣೆ ಮಾಡಲಾಗಿದೆ. ಮುಖ್ಯಮಂತ್ರಿ, ಸಚಿವರು ಬದಲಾಗುತ್ತಿದ್ದಂತೆಯೇ ಅಧಿಕಾರಿಗಳ ವರ್ಗಾವಣೆಯೂ ಬಿರುಸು ಪಡೆಯುತ್ತದೆ. ವರ್ಗಾವಣೆ ಕಾಯ್ದೆಗೆ ಬೆಲೆ ಇಲ್ಲದಂತಾಗಿದೆ. `ಕೈಬಿಸಿ' ಮಾಡಿದರಷ್ಟೇ ಆಯಕಟ್ಟಿನ ಜಾಗಗಳು ದೊರೆಯುತ್ತವೆ. ಇಲ್ಲದಿದ್ದರೆ ಅಷ್ಟೇನೂ ಮಹತ್ವವಲ್ಲದ ಹುದ್ದೆಗಳಿಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಕೆ.ಎ.ಎಸ್ ಅಧಿಕಾರಿಯೊಬ್ಬರು ಬೇಸರ ವ್ಯಕ್ತಪಡಿಸಿದರು. : ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿರುವುದರಿಂದ ಈ ವರ್ಷ ಹೆಚ್ಚಿನ ಪ್ರಮಾಣದಲ್ಲಿ ನೌಕರರ ವರ್ಗಾವಣೆಯಾಗುವ ಸಾಧ್ಯತೆ ಇದೆ. ಹೊಸದಾಗಿ ಬರಲಿರುವ ಸಚಿವರು, ನೂತನ ಶಾಸಕರು ತಮಗೆ ಬೇಕಾದ ಅಧಿಕಾರಿಗಳನ್ನು ಆಯಕಟ್ಟಿನ ಜಾಗಗಳಿಗೆ ವರ್ಗಾವಣೆ ಮಾಡಿಸಿಕೊಳ್ಳುವುದು ರೂಢಿ. ಹೀಗಾಗಿ ಬದಲಾವಣೆ ಭಾರಿ ಪ್ರಮಾಣದಲ್ಲೇ ನಡೆಯುವ ನಿರೀಕ್ಷೆ ಇದೆ.

CLICK PHOT&JOIN: Karnataka government employee's News & Order's exchange Teligram GROUP

CLICK PHOT&JOIN: Karnataka government employee's News & Order's exchange Teligram GROUP
ಬಹಳ ಸದಸ್ಯರ ಒತ್ತಾಯದಮೇರೆಗೆ ಗುಂಪಿಗೆ ಮರುಚಾಲನೆ ನೀಡಲಾಗಿದೆ. ಕೆಟ್ಟ=ಟೀಕೆ,ಟಿಪ್ಪಣಿ,ಸ್ವಗತ ಇಲ್ಲಿ ನಿಷೇಧ, ಎಲ್ಲೋ ಕುಳಿತು ನಿಮ್ಮ ಬೆರಳು/ಯೋಚನೆ ಅಡ್ಮಿನ್ ನಿಯಂತ್ರಣ ಮಾಡಲು ಆಗಲ್ಲ, ಚರ್ಚಿಸುವ ಮುಂಚೆ ಯೋಚಿಸಿ ಪೋಸ್ಟ್ ಮಾಡಿ, ನೀವೂ ತೊಂದರೆಗೆ ಸಿಲುಕಬೇಡಿ, ಅಡ್ಮಿನಿಗೂ ತೊಂದರೆ ಕೊಡಬೇಡಿ. ಆರೋಗ್ಯಕರ ಚರ್ಚೆ, ಸಹಾಯ, ಸ್ನೇಹ ಗುಂಪಿನ ಗುರಿ. ಎಲ್ಲರೂ ಭಾಗವಹಿಸಲು ಪೋಸ್ಟ್ ಮಾಡುವ ಅವಕಾಶ ನೀಡಲಾಗಿದೆ. ನಿಯಮ ಮೀರುವ ಸದಸ್ಯರನ್ನು ಮುಲಾಜಿಲ್ಲದೇ ಹೊರಹಾಕಿ ಬ್ಲಾಕ್ ಮಾಡಲಾಗುವುದು ಇದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸುದ್ದಿ ಆದೇಶ ವಿನಿಮಯ ಟೆಲಿಗ್ರಾಂ ಗುಂಪಿನ ಆಹ್ವಾನ ಕೊಂಡಿ. ಮೇಲಿನ ಫೋಟೋ ಬೆರಳಿಂದ ತಟ್ಟುವ ಮುಖಾಂತರ ಗುಂಪಿಗೆ ನೀವೇ ಸೇರ್ಪಡೆ ಆಗಬಹುದು. ತಟ್ಟುವ ಮುಂಚೆ ಟೆಲಿಗ್ರಾಂ ಆಪ್ ಹಾಕಿಕೊಂಡು ತಟ್ಟಿ.