Search in ThisBlogಈಬ್ಲಾಗಲ್ಲಿ ವಿಷಯ ಹುಡುಕಿ

Thursday, January 9, 2020

promotion to teachers

C Kannada News Now

ಬಿಇಡಿಬಿ/ಬಿಪಿಎಡ್ಧವೀದರ ಪ್ರಾಥಮಿಕ ಶಾಲಾ ಶಿಕ್ಷಕರೇ ಗಮನಿಸಿ : ಬಡ್ತಿಗಾಗಿ ಹೆಸರು ಸೇರ್ಪಡೆಗೊಳಿಸಿ

ಕಲಬುರಗಿ : 2019ನೇ ಬ್ಲಾಕ್ ಅವಧಿಗೆ ಕಲಬುರಗಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿ.ಇಡಿ./ಬಿ.ಪಿ.ಇಡಿ. ತರಬೇತಿ ಹೊಂದಿದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರೌಢಶಾಲಾ ಸಹ ಶಿಕ್ಷಕರು ಗ್ರೇಡ್-2 ಹಾಗೂ ದೈಹಿಕ ಶಿಕ್ಷಕ ಶಿಕ್ಷಕರ ಗ್ರೇಡ್-1 ಹುದ್ದೆಗೆ ಬಡ್ತಿ ನೀಡಲು ಜೇಷ್ಠತಾ ಪಟ್ಟಿ ಸಿದ್ಧಪಡಿಸಬೇಕಾಗಿದೆ. ಇದಕ್ಕಾಗಿ ಅರ್ಹ ಶಿಕ್ಷಕರು ನಿಗದಿತ ನಮೂನೆಯಲ್ಲಿ ಪ್ರಸ್ತಾವನೆ ಸಲ್ಲಿಸಬೇಕೆಂದು ಎಂದು ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

2019ರ ಜನವರಿ 1 ರಿಂದ ಡಿಸೆಂಬರ್ 31 ರ ಮಧ್ಯದ ಅವಧಿಯಲ್ಲಿ ಬಿ.ಇಡಿ./ಬಿ.ಪಿ.ಇಡಿ. ತರಬೇತಿ ಹೊಂದಿದ ಶಿಕ್ಷಕರು ಜೇಷ್ಠತಾ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಪ್ರಸ್ತಾವನೆಗಳನ್ನು ನಿಗದಿತ ನಮೂನೆಯಲ್ಲಿ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ 2020ರ ಜನವರಿ 17 ರೊಳಗಾಗಿ ಸಲ್ಲಿಸಬೇಕು.

2018ನೇ ಬ್ಲಾಕ್ ಅವಧಿಗೆ ಜೇಷ್ಠತಾ ಪಟ್ಟಿಯಲ್ಲಿ ಸೇರಿಸುವ ಶಿಕ್ಷಕರು ಪುನ: ಪ್ರಸ್ತಾವನೆ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಕೇವಲ 2019ರ ಜನವರಿ 1 ರಿಂದ ಡಿಸೆಂಬರ್ 31 ರ ಮಧ್ಯದ ಅವಧಿಯಲ್ಲಿ ಬಿ.ಇಡಿ./ಬಿ.ಪಿ.ಇಡಿ. ವಿದ್ಯಾರ್ಹತೆ ಪಡೆದಿರುವ ಶಿಕ್ಷಕರು ಮಾತ್ರ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.

DailyhuntReport

CLICK PHOT&JOIN: Karnataka government employee's News & Order's exchange Teligram GROUP

CLICK PHOT&JOIN: Karnataka government employee's News & Order's exchange Teligram GROUP
ಬಹಳ ಸದಸ್ಯರ ಒತ್ತಾಯದಮೇರೆಗೆ ಗುಂಪಿಗೆ ಮರುಚಾಲನೆ ನೀಡಲಾಗಿದೆ. ಕೆಟ್ಟ=ಟೀಕೆ,ಟಿಪ್ಪಣಿ,ಸ್ವಗತ ಇಲ್ಲಿ ನಿಷೇಧ, ಎಲ್ಲೋ ಕುಳಿತು ನಿಮ್ಮ ಬೆರಳು/ಯೋಚನೆ ಅಡ್ಮಿನ್ ನಿಯಂತ್ರಣ ಮಾಡಲು ಆಗಲ್ಲ, ಚರ್ಚಿಸುವ ಮುಂಚೆ ಯೋಚಿಸಿ ಪೋಸ್ಟ್ ಮಾಡಿ, ನೀವೂ ತೊಂದರೆಗೆ ಸಿಲುಕಬೇಡಿ, ಅಡ್ಮಿನಿಗೂ ತೊಂದರೆ ಕೊಡಬೇಡಿ. ಆರೋಗ್ಯಕರ ಚರ್ಚೆ, ಸಹಾಯ, ಸ್ನೇಹ ಗುಂಪಿನ ಗುರಿ. ಎಲ್ಲರೂ ಭಾಗವಹಿಸಲು ಪೋಸ್ಟ್ ಮಾಡುವ ಅವಕಾಶ ನೀಡಲಾಗಿದೆ. ನಿಯಮ ಮೀರುವ ಸದಸ್ಯರನ್ನು ಮುಲಾಜಿಲ್ಲದೇ ಹೊರಹಾಕಿ ಬ್ಲಾಕ್ ಮಾಡಲಾಗುವುದು ಇದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸುದ್ದಿ ಆದೇಶ ವಿನಿಮಯ ಟೆಲಿಗ್ರಾಂ ಗುಂಪಿನ ಆಹ್ವಾನ ಕೊಂಡಿ. ಮೇಲಿನ ಫೋಟೋ ಬೆರಳಿಂದ ತಟ್ಟುವ ಮುಖಾಂತರ ಗುಂಪಿಗೆ ನೀವೇ ಸೇರ್ಪಡೆ ಆಗಬಹುದು. ತಟ್ಟುವ ಮುಂಚೆ ಟೆಲಿಗ್ರಾಂ ಆಪ್ ಹಾಕಿಕೊಂಡು ತಟ್ಟಿ.