Search in ThisBlogಈಬ್ಲಾಗಲ್ಲಿ ವಿಷಯ ಹುಡುಕಿ
Thursday, October 25, 2018
Wednesday, October 24, 2018
Tuesday, October 23, 2018
Monday, October 22, 2018
Sunday, October 21, 2018
Thursday, October 18, 2018
Transfers 2018 unique
‘ವರ್ಗಾವಣೆ: ಸಚಿವರು ಮೂಗು ತೂರಿಸುವಂತಿಲ್ಲ’
ಪ್ರಜಾವಾಣಿ ವಾರ್ತೆ
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅನುಮೋದಿಸಿದ ವರ್ಗಾವಣೆಗಳಲ್ಲಿ ಜೆಡಿಎಸ್–ಕಾಂಗ್ರೆಸ್ ಮೈತ್ರಿ ಸರ್ಕಾರದ ಸಚಿವರು ಇನ್ನು ಮುಂದೆ ಮೂಗು ತೂರಿಸುವಂತಿಲ್ಲ!
ಮುಖ್ಯಮಂತ್ರಿ ಅವರ ಸೂಚನೆಯ ಮೇರೆಗೆ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಮಂಗಳವಾರ ಈ ಸಂಬಂಧ ಸುತ್ತೋಲೆ ಹೊರಡಿಸಿದ್ದಾರೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಡುವ ಅಧಿಕಾರಿಗಳು ವರ್ಗಾವಣೆಗೊಂಡ ಸ್ಥಳಗಳಿಗೆ ನೇರವಾಗಿ ಕರ್ತವ್ಯಕ್ಕೆ ಹಾಜರಾಗಿ ವರದಿ ಮಾಡಿಕೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ. ಐಎಎಸ್, ಐಪಿಎಸ್, ಐಎಫ್ಎಸ್, ಕೆಎಎಸ್, ಮುಖ್ಯ ಎಂಜಿನಿಯರ್ಗಳು ಹಾಗೂ ಎಲ್ಲ ಇಲಾಖೆಗಳ ಮುಖ್ಯಸ್ಥರ ವರ್ಗಾವಣೆಗೆ ಈ ಸುತ್ತೋಲೆ ಅನ್ವಯವಾಗಲಿದೆ. ಇದು ಮೈತ್ರಿ ಸರ್ಕಾರದಲ್ಲಿ ಇನ್ನೊಂದು ಸುತ್ತಿನ ಸಂಘರ್ಷಕ್ಕೂ ಹಾದಿ ಮಾಡಿಕೊಡುವ ಸಾಧ್ಯತೆ ಇದೆ.
ಜಲಸಂಪನ್ಮೂಲ ಇಲಾಖೆಯ 25 ಮುಖ್ಯ ಎಂಜಿನಿಯರ್ಗಳನ್ನು ವರ್ಗಾವಣೆ ಮಾಡಲಾಗಿತ್ತು. ಇದಕ್ಕೆ ಇಲಾಖೆ ಸಚಿವ ಡಿ.ಕೆ.ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಪೈಕಿ ಐದು ಮಂದಿಗೆ ಮಾತ್ರ ಸ್ಥಳ ನಿಯೋಜನೆ ಮಾಡಲಾಗಿತ್ತು. ಉಳಿದ 21 ಮಂದಿ ಒಂದು ತಿಂಗಳು ಅತಂತ್ರರಾಗಿದ್ದರು. ಬಳಿಕ ಶಿವಕುಮಾರ್ ಅವರು ಮರು ಆದೇಶ ಹೊರಡಿಸಿದ್ದರು. ಈ ಸುತ್ತೋಲೆ ಪ್ರಕಾರ, ಇನ್ನು ಮುಂದೆ ಮರು ಆದೇಶ ಹೊರಡಿಸಲು ಅವಕಾಶ ಇಲ್ಲ.
‘ಇನ್ನು ಮುಂದೆ ಮುಖ್ಯಮಂತ್ರಿ
ಯವರಿಂದ ಅನುಮೋದನೆಗೊಂಡ ಪ್ರಕರಣಗಳಲ್ಲಿ ವಿವಿಧ ಇಲಾಖೆಗಳ ನಿಗಮ, ಮಂಡಳಿ, ಪ್ರಾಧಿಕಾರ, ಸ್ಥಳೀಯ ಸಂಸ್ಥೆಗಳ ಅಧೀನದಲ್ಲಿರುವ ಹುದ್ದೆಗಳಿಗೆ ನೇರವಾಗಿ ಸ್ಥಳ ನಿಯುಕ್ತಿಗೊಳಿಸ
ಬೇಕು. ಇಂತಹ ಪ್ರಕರಣಗಳಲ್ಲಿ ಆಡಳಿತ ಇಲಾಖೆಗಳು ಮರುಸ್ಥಳ ನಿಯುಕ್ತಿ ಆದೇಶ ನೀಡುವ ಅಗತ್ಯವಿಲ್ಲ’ ಎಂದೂ ಸುತ್ತೋಲೆ ತಿಳಿಸಿದೆ.
ಈ ವಿಷಯವನ್ನು ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಗಮನಕ್ಕೆ ತರುತ್ತೇನೆ
ಯು.ಟಿ.ಖಾದರ್
ನಗರಾಭಿವೃದ್ಧಿ ಸಚಿವ
Kannada prabha clippings below